ರಾಜಕೀಯ

ಲೋಕಸಭೆ ಚುನಾವಣೆ: ಅತೃಪ್ತ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

ಕೋಲಾರ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬಯಲು ಸೀಮೆ ಪ್ರದೇಶ ಕೋಲಾರದಲ್ಲಿ ಬಿಜೆಪಿ ಬಲ ಹೆಚ್ಚಾಗುತ್ತಿದ್ದು  ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪ್ರಮುಖ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಸಮ್ಮುಖದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಿದ್ದರೆ. ಇನ್ನು ಕಾಂಗ್ರೆಸ್ ನ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿರುವ ಕಾಂಗ್ರೆಸ್ ಸಂಸದ ಕೆಎಚ್ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಸೋಲಿಲ್ಲದ ಸರದಾರ ಕೆಎಚ್ ಮುನಿಯಪ್ಪ ಅವರ ವಿರುದ್ಧ ತೊಡೆ ತಟ್ಟಿರುವ ದಲಿತ ಸಮುದಾಯಕ್ಕೆ ಸೇರಿದ ಬಾಜಾಚಿ ಚನ್ನಯ್ಯ ಮತ್ತು ಬಿಪಿ ಮುನಿವೆಂಕಟಪ್ಪ ಎಂಬುವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಎಚ್ ಮುನಿಯಪ್ಪನವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಸಂಸದರನ್ನು ಸೋಲಸಬೇಕೆಂಬ ಪಣ ತೊಟ್ಟಿದ್ದೇವೆ. ಈಗಾಗಲೇ ಇದಕ್ಕೆ ಸಿದ್ಧತೆ ನಡೆಸಿಕೊಂಡಿದ್ದೇವೆ ಎಂದು ಬಿಜೆಪಿ ಸೇರಿದ ಕಾಂಗ್ರೆಸ್ ಅತೃಪ್ತ ಮುಖಂಡರು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment