ರಾಷ್ಟ್ರ ಸುದ್ದಿ

ಲೋಕಸಭೆ ಚುನಾವಣೆ: ಮಮತಾಗೆ ಹಿನ್ನಡೆ, ಟಿಎಂಸಿ ಶಾಸಕ ಅರ್ಜುನ್ ಸಿಂಗ್ ಬಿಜೆಪಿ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನವೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಟಿಎಂಸಿ ಹಾಲಿ ಶಾಸಕ ಅರ್ಜುನ್ ಸಿಂಗ್ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಉತ್ತರ 24 ಪರಾಗಣ ಕ್ಷೇತ್ರದ ಶಾಸಕರಾಗಿದ್ದ ಅರ್ಜುನ್ ಸಿಂಗ್ ಅವರು ಬರಾಕ್ ಪೋರ್ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಅರ್ಜನ್ ಸಿಂಗ್ ಅವರು ಇಂದು ಟಿಎಂಸಿ ತೊರೆದು ಬಿಜೆಪಿ ಸೇರಿದ್ದಾರೆ. ಕಳೆದ ಮಂಗಳವಾರ ಟಿಎಂಸಿ ಮಾಜಿ ಸಂಸದ ಅನುಪಮ್ ಹಜ್ರಾ ಅವರು ಸಹ ದೀದಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

About the author

ಕನ್ನಡ ಟುಡೆ

Leave a Comment