ರಾಜಕೀಯ

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆತ್ತಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ

ಮೈಸೂರು: ಅಚ್ಚರಿಯ ಬೆಳವಣಿಗೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರು ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ವರುಣಾದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸುತ್ತಾರೆ. ಅವರಿಗೆ ನಿಮ್ಮ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.

ಆರ್​ಎಸ್​ಎಸ್​ ಹಿನ್ನೆಲೆ ಹೊಂದಿರುವ ಮೈಸೂರು ಜಿ.ಪಂ.ಸದಸ್ಯ ಸದಾನಂದ ಅವರು ವರುಣಾದಿಂದ ಸ್ಪರ್ಧಿಸುತ್ತಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ವರುಣಾದಿಂದ ವಿಜಯೇಂದ್ರ ಅವರಿಗೆ ಟಿಕೆಟ್​ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ವಿಜಯೇಂದ್ರ ಅವರ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ. ವಿಜಯೇಂದ್ರ ಅವರೇ ಸ್ಪರ್ಧಿಸಬೇಕು ಎಂದು ಅವರ ಬೆಂಬಲಿಗರು ಘೋಷಣೆ ಕೂಗಿ ಆಗ್ರಹಿಸಿದರು

 

 

About the author

ಕನ್ನಡ ಟುಡೆ

Leave a Comment