ರಾಜಕೀಯ

ವಿಧಾನಸಭಾ ಉಪ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ದಿಢೀರ್ ಸಭೆ ಕರೆದ ಬಿ.ಎಸ್​.ಯಡಿಯೂರಪ್ಪ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಜಮಖಂಡಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ದಿಢೀರ್ ಸಭೆ ಕರೆದಿದ್ದಾರೆ. ಜಮಖಂಡಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಸಂಬಂಧ ಈ ಸಭೆ ಕರೆಯಲಾಗಿದ್ದು, ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಯಡಿಯೂರಪ್ಪ ಬಾಗಲಕೋಟೆ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಹೀಗಾಗಿ ಬಿಜೆಪಿ ಟಿಕೆಟ್​ ಆಕಾಂಕ್ಷಿಗಳು ಮತ್ತು ಮುಖಂಡರು ಸಭೆಗೆ ತೆರಳಲು ಸಿದ್ಧರಾಗಿದ್ದಾರೆ.

ಮಾಜಿ ಶಾಸಕ ಶ್ರೀಕಾಂತ ಕುಲಕಣಿ೯, ಜಿಲ್ಲಾಧ್ಯಕ್ಷ ಸಿದ್ದು ಸವದಿ, ಮಾಜಿ ಸಚಿವ ಮುರುಗೇಶ ನಿರಾಣಿ, ನಾರಾಯಣಸಾ ಭಾಂಡಗೆ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ಇಂದೇ ಬಿಜೆಪಿ ಅಭ್ಯಥಿ೯ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಜಮಖಂಡಿಯಲ್ಲಿ ಸ್ಫಧೆ೯ಗೆ ಮುಂದಾಗಿರುವ ಶ್ರೀಕಾಂತ ಕುಲಕಣಿ೯ ಮತ್ತು ಸಂಗಮೇಶ ನಿರಾಣಿ ಮಧ್ಯೆ ಟಿಕೆಟ್ ಗುದ್ದಾಟ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದಲ್ಲಿಯೇ ಇಂದು ಜಿಲ್ಲೆಯ ನಾಯಕರು ಒಗ್ಗಟ್ಟು ಪ್ರದಶಿ೯ಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಿಜೆಪಿ ಟಿಕೆಟ್​ ಆಕಾಂಕ್ಷಿ ಸಂಗಮೇಶ್​ ನಿರಾಣಿಯ ಮನವೊಲಿಸಿ ಬಂಡಾಯ ಶಮನ ಮಾಡಲು ಸಭೆಯಲ್ಲಿ ಉಪಾಯ ಮಾಡಿದ್ದಾರೆ ಎನ್ನಲಾಗಿದೆ. ಅಣ್ಣ ಮುರುಗೇಶ್ ನಿರಾಣಿ ಮೂಲಕ ಮನವೊಲಿಸಿ ಬಿ.ಎಸ್.ಯಡಿಯೂರಪ್ಪ ಪಕ್ಷದಲ್ಲಿ ಸಂಗಮೇಶ್​ ನಿರಾಣಿಗೆ ಸೂಕ್ತ ಹುದ್ದೆ ಸ್ಥಾನ ನೀಡುವುದಾಗಿ ಮಾತು ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

About the author

ಕನ್ನಡ ಟುಡೆ

Leave a Comment