ರಾಜ್ಯ ಸುದ್ದಿ

ವಿಧಾನಸಭೆ ಚುನಾವಣೆ; 3 ರಾಜ್ಯಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿದ್ದು, ಮೂರು ರಾಜ್ಯಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.
ಮಧ್ಯಪ್ರದೇಶ 230 ಕ್ಷೇತ್ರಗಳ ಪೈಕಿ 177 ಕ್ಷೇತ್ರಗಳಿಗೆ, ಮಿಜೋರಾಂನಲ್ಲಿ 24 ಮತ್ತು ತೆಲಂಗಾಣದಲ್ಲಿ 28 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಲ್ಲಿ ಒಟ್ಟು 230 ವಿಧಾನಸಭಾ ಕ್ಷೇತ್ರಗಳಿದ್ದರೆ, ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿವೆ. ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನ,28 ರಂದು ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳಿದ್ದು, ಡಿ.7 ರಂದು ಚುನಾವಣೆ ನಡೆಯಲಿದೆ.

About the author

ಕನ್ನಡ ಟುಡೆ

Leave a Comment