ಅ೦ತರಾಷ್ಟ್ರೀಯ

ವಿಶ್ವಸಂಸ್ಥೆಯಲ್ಲಿ ಅಮೆರಿಕ ರಾಯಭಾರಿಯಾಗಿದ್ದ ನಿಕ್ಕಿ ಹ್ಯಾಲೆ ರಾಜೀನಾಮೆ

ವಾಷಿಂಗ್ ಟನ್: ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿಯಾಗಿದ್ದ ನಿಕ್ಕಿ ಹ್ಯಾಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಕಚೇರಿಗೆ ರಾಜೀನಾಮೆ ಪತ್ರವನ್ನು ನಿಕ್ಕಿ ಹ್ಯಾಲೆ ಸಲ್ಲಿಸಿದ್ದು, ಅಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹಾಗೂ ಸಚಿವ ಮೈಕ್ ಪೊಂಪೀ ಅವರಿಗೆ ಅಚ್ಚರಿ ಉಂಟು ಮಾಡಿದೆ ಎಂದು ತಿಳಿದುಬಂದಿದೆ. ಡೊನಾಲ್ಡ್ ಟ್ರಂಪ್ ಈ ಬೆಳವಣಿಗೆ ಬಗ್ಗೆ ಟ್ವೀಟ್ ಮಾಡಿದ್ದು, ನಿಕ್ಕಿ ಹ್ಯಾಲೆಯನ್ನು ನನ್ನ ಸ್ನೇಹಿತೆ ಎಂದು ಹೇಳಿದ್ದಾರೆ. ರಾಯಭಾರಿಯಾಗಿರುವ ನನ್ನ ಸ್ನೇಹಿತೆ ನಿಕ್ಕಿ ಹ್ಯಾಲೆ ಅಚ್ಚರಿಯ ಘೋಷಣೆ ಮಾಡಿದ್ದಾರೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ತಳ್ಳಿಹಾಕಿದ ನಿಕ್ಕಿ : ಇದೇ ವೇಳೆ ನಿಕ್ಕಿ ಹ್ಯಾಲೆ ರಾಜೀನಾಮೆ ಬಳಿಕ ಆಕೆ 2020 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ವದಂತಿ ಹಬ್ಬಿತ್ತು. ಆದರೆ 2020 ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿಕ್ಕಿ ಹ್ಯಾಲೆ ಸ್ಪಷ್ಟನೆ ನೀಡಿದ್ದಾರೆ.

About the author

ಕನ್ನಡ ಟುಡೆ

Leave a Comment