ರಾಜ್ಯ ಸುದ್ದಿ

ವಿಶ್ವ ವಿಖ್ಯಾತ ಜಂಬೂಸವಾರಿಗೆ ಅರಮನೆ ನಗರಿ ಮೈಸೂರು ಸಜ್ಜು

ಮೈಸೂರು: 408ನೇ ದಸರಾ ದ ಪ್ರಮುಖ ಆಕರ್ಷಣೆಯ ಜಂಬಸವಾರಿಗೆ ಸಾಂಸ್ಕೃತಿಕ ನಗರಿ ಮೈಸರೂ ಸಕಲ ರೀತಿಯಲ್ಲಿ ಸಿದ್ದವಾಗಿದೆ. ದೇಶ-ವಿದೇಶಗಳ ಪ್ರವಾಸಿಗರು ಪ್ರಸಿದ್ಧ ಜಂಬೂ ಸವಾರಿ ವೀಕ್ಷಣೆಗೆ ಕಾತುರರಾಗಿದ್ದಾರೆ. ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ, ರಾಜ್ಯದ ಎಲ್ಲಾ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿವೆ. ಇನ್ ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅಕ್ಟೋಬರ್ 10 ರಂದು ದಸರಾಗೆ ಚಾಲನೆ ನೀಡಿದ್ದಾರೆ, ಮೈಸೂರಿನ 38 ಸ್ಥಳಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿತ್ತು. ಅಕ್ಟೋಬರ್ 19 ಶುಕ್ರವಾರ ಮಧ್ಯಾಹ್ನ 2.30ರಿಂದ 3.15 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಯಧುವೀರ್ ಚಾಮರಾಜ ಒಡೆಯರ್ ಕೂಡ ಹಾಜರಿರಲಿದ್ದಾರೆ.ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಸುಮಾರು 4.5 ಕಿಮೀ ನಡೆಯುವ ಮೆರವಣಿಗೆಯಲ್ಲಿ 42 ಗುಂಪುಗಳಲ್ಲಿ ಸುಮಾರು 2,500 ಕಲಾವಿದರು ಭಾಗವಹಿಸಲಿದ್ದಾರೆ, ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5284 ಜನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್‌ ಕಮಾಂಡೋ ಭದ್ರತೆ ಒದಗಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

About the author

ಕನ್ನಡ ಟುಡೆ

Leave a Comment