ರಾಜ್ಯ ಸುದ್ದಿ

ವಿಷ ಪ್ರಸಾದ ದುರಂತ: ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ

ಚಾಮರಾಜನಗರ: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ನೀಡುವುದಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿದ ಕುಮಾರಸ್ವಾಮಿ ಸಂತ್ರಸ್ಥರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಕುಮಾರಸ್ವಾಮಿ, ಸಚಿವ ಸಿಎಸ್ ಪುಟ್ಟರಾಜು ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿ ಕುಟುಂಬಸ್ಥರಿಗೆ ಸಮಾಧಾನ ಹೇಳಿದ್ದಾರೆ. ಅಲ್ಲದೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ದೇವಾಲಯದಲ್ಲಿ ಇಂತಹ ಘಟನೆ ನಡೆದರೆ ಯಾರನ್ನ ನಂಬುವುದು. ಯಾರೇ ಇಂತಹ ಘಟನೆಗಳ ಹಿಂದೆ ಇದ್ದರೂ ಕಠಿಣ ಕ್ರಮ ಜರುಗಿಸುತ್ತೇವೆ. ಎಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ವೆಚ್ಚವನ್ನ ಸರ್ಕಾರ ಭರಿಸುತ್ತೆ. ಮರಣ ಹೊಂದಿರುವವರ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment