ರಾಜ್ಯ ಸುದ್ದಿ

ವೀರಶೈವ-ಲಿಂಗಾಯತ ಸಮುದಾಯದ ಸರ್ಕಾರಿ ನೌಕರರನ್ನು ಸರ್ಕಾರ ಕಡೆಗಣಿಸುತ್ತಿದೆ: ಬಿ.ಎಸ್. ಯಡಿಯೂರಪ್ಪ

ಮೈಸೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರರನ್ನು ಕಳೆದ 5 ವರ್ಷಗಳಿಂದ ಕಡೆಗಣಿಸಲಾಗುತ್ತಿದ್ದು ಇಂದಿನ ಮೈತ್ರಿ ಸರ್ಕಾರ ಈ ಬಗ್ಗೆ ಕಿವುಡನಂತೆ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅವರು ನಿನ್ನೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ನೌಕರರ ಅಭಿವೃದ್ಧಿ ಸಂಸ್ಥೆಯ 10ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅದು ನೇಮಕಾತಿ ಅಥವಾ ವರ್ಗಾವಣೆಯಾಗಿರಲಿ, ಸರ್ಕಾರಿ ಉದ್ಯೋಗದಲ್ಲಿರುವ ಲಿಂಗಾಯತ ಮತ್ತು ವೀರಶೈವ ಸಮುದಾಯದವರನ್ನು ಅವರಿಗೆ ಸಾಮರ್ಥ್ಯವಿದ್ದರೂ ಕೂಡ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಈ ವಿಷಯವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಜಾತಿ ಆಧಾರದ ಮೇಲೆ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ವಿಚಾರದಲ್ಲಿ ತಾರತಮ್ಯವೆಸಗುತ್ತಿರುವುದು ಸರ್ಕಾರಕ್ಕೆ ಯೋಗ್ಯವಲ್ಲ. ಸಿಎಂ ಮತ್ತು ಸಂಪುಟದ ಇತರ ಸಚಿವರು ಪ್ರತಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು, ವಿರೋಧ ಪಕ್ಷದ ನಾಯಕನಾಗಿ ನಾನು ನನ್ನಿಂದಾದ ಪ್ರಯತ್ನ ಮಾಡುತ್ತೇನೆ ಎಂದರು.

About the author

ಕನ್ನಡ ಟುಡೆ

Leave a Comment