ರಾಷ್ಟ್ರ ಸುದ್ದಿ

ವೀರಶೈವ ಹಾಗೂ ಲಿಂಗಾಯತ ಒಂದೇ; ಮಹತ್ವದ ನಿರ್ಣಯ

ಬೆಂಗಳೂರು: ಲಿಂಗಾಯತ ಮತ್ತು ವೀರಶೈವ ಎರಡೂ ಒಂದೇ ಎಂದು ‘ಅಖಿಲ ಭಾರತ ವೀರಶೈವ ಮಹಾಸಭಾ’ ಒಮ್ಮತದ ನಿರ್ಣಯ ತೆಗೆದುಕೊಂಡಿದೆ.
ವೀರಶೈವ-ಲಿಂಗಾಯತರಲ್ಲಿ ಸ್ವತಂತ್ರ ಧರ್ಮಕ್ಕೆ ಸಂಬಂಧಿಸಿದಂತೆ ತಿಕ್ಕಾಟ ತೀವ್ರಗೊಂಡ ಹಿನ್ನಲೆಯಲ್ಲಿ ಇಂದು ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರಿನ ಮಹತ್ವದ ಸಭೆ ಸೇರಿತ್ತು. ಈ ಸಭೆಯಲ್ಲಿ ಎರಡೂ ಲಿಂಗಾಯತ ವೀರಶೈವ ಎರಡೂ ಪಂಗಡಗಳು ಒಂದೇ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಈ ಸಭೆಯಲ್ಲಿ ಸೇರಲಿದ್ದು 65 ಕಾರ್ಯಕಾರಿಣಿ ಸದಸ್ಯರು, ರಾಜ್ಯದ 30 ಜಿಲ್ಲೆಗಳ ಅಧ್ಯಕ್ಷರು, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ, ತೆಲಂಗಾಣದ ಅಧ್ಯಕ್ಷರು ಭಾಗವಹಿಸಿದ್ದರು.
ಈ ಹಿಂದೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಆಗಿರುವ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

About the author

ಕನ್ನಡ ಟುಡೆ

Leave a Comment