ಕ್ರೀಡೆ

ವೀರೇಂದ್ರ ಸೆಹ್ವಾಗ್ ನನ್ನನು ಆಯ್ಕೆ ಮಾಡುವ ಮೂಲಕ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಯ್ಲ್

ಮೊಹಾಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಪಂಜಾಬ್ ತಂಡಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ವೀರೇಂದ್ರ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕ್ರಿಸ್ ಗೇಯ್ಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ.  ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೇಯ್ಲ್ ಶತಕ ಸಿಡಿಸಿ ಪಂಜಾಬ್ ಗೆಲುವಿಗೆ ಕಾರಣರಾಗಿದ್ದರು. ಈ ಕುರಿತು ಸಂತೋಷ ಹಂಚಿಕೊಂಡ ಸೆಹ್ವಾಗ್ ಕ್ರಿಸ್ ಗೇಯ್ಲ್ ರನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ರಕ್ಷಣೆ ಮಾಡಿರುವುದಾಗಿ ಗೇಯ್ಲ್ ರ ಕಾಲೆಳಿದಿದ್ದರು.

ಇದಕ್ಕೆ ಗೇಯ್ಲ್ ಸಹ ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಅಲ್ಲದೆ ಎಲ್ಲರೂ ನನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಲು ಸಲಹೆ ನೀಡಿದರು. ಆದರೆ ಇಲ್ಲಿ ನನ್ನ ಹೆಸರಿಗೆ ಗೌರವ ಗಳಿಸಲು ಮಾತ್ರ ಇರುವುದಾಗಿ ಹೇಳಿದ್ದಾರೆ.  2018ರ ಐಪಿಎಲ್ ಹರಾಜಿನಲ್ಲಿ ಕ್ರಿಸ್ ಗೇಯ್ಲ್ ರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿ ತಂಡಗಳು ಹಿಂದೇಟು ಹಾಕಿದ್ದವು. ಆದರೆ ಕೊನೆಯಲ್ಲಿ ಪಂಜಾಬ್ ತಂಡದ ಮೆಂಟರ್ ಆಗಿದ್ದ ಸೆಹ್ವಾಗ್ ಗೇಯ್ಲ್ ರನ್ನು ಮೂಲ ಬೆಲೆ 2 ಕೋಟಿ ರುಪಾಯಿಗೆ ಖರೀದಿಸಿದ್ದರು.

 

 

About the author

ಕನ್ನಡ ಟುಡೆ

Leave a Comment