ರಾಜ್ಯ ಸುದ್ದಿ

ವೈಕುಂಠ ಏಕಾದಶಿ: ತಿಮ್ಮಪ್ಪನ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಮಂಗಳವಾರ ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವೇಗೌಡರ ಕುಟುಂಬ ಪ್ರತಿ ವರ್ಷ ವೈಕುಂಠ ಏಕಾದಶಿ ದಿನದಂದು ಆಂಧ್ರ ಪ್ರದೇಶದ ತಿರುಪತಿಗೆ ತೆರಳಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯುವುದು ವಾಡಿಕೆಯಾಗಿದೆ. ಈ ಬಾರಿ ಮಗ ಕುಮಾರಸ್ವಾಮಿ, ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಗಮವಾಗಿ ನಡೆಯಲಿ ಎಂದು ತಿಮ್ಮಪ್ಪನಿಗೆ ಕುಟುಂಬದಿಂದ ಹರಕೆ ಸಲ್ಲಿಸಿದ್ದಾರೆ. ಮಂಗಳವಾರ ಮುಂಜಾನೆ 4 ಗಂಟೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಈ ವೇಳೆ ಜೆಡಿಎಸ್ ಮುಖಂಡ ಶರವಣ ಸೇರಿದಂತೆ ಹಲವಾರು ಜೆಡಿಎಸ್ ನಾಯಕರು ಸಾಥ್​ ನೀಡಿದರು.

About the author

ಕನ್ನಡ ಟುಡೆ

Leave a Comment