ರಾಜ್ಯ

ವೋಟರ್ ಐಡಿ ಮಾದರಿಯಲ್ಲಿ ಮದುವೆಯ ಆಮಂತ್ರಣ

ಹಾವೇರಿ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ ಹಾವೇರಿಯಲ್ಲೊಬ್ಬರು ಮತದಾನದ ಅರಿವು ಮೂಡಿಸುವ ಸಲುವಾಗಿ ಮತ್ತು ಮತದಾನ ಜಾಗೃತಿಗಾಗಿ ವಿಶಿಷ್ಟ ಕಾರ್ಯವನ್ನು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನೇ ವೋಟರ್ ಐಡಿ ಮಾದರಿಯಲ್ಲಿ ಮುದ್ರಣ ಮಾಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದಲ್ಲಿ ಮದುವೆ ಆಗುತ್ತಿರುವ ಜೋಡಿಗಳು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನು ವೋಟರ್ ಐಡಿ ಮಾದರಿಯಲ್ಲಿ ಮುದ್ರಣ ಮಾಡಿಸಿದ್ದಾರೆ.  ಸಿದ್ದಪ್ಪ ಜ್ಯೋತಿ ಎಂಬುವವರನ್ನು ಇದೇ ಏ.27 ರಂದು ಮದುವೆಯಾಗಲಿದ್ದಾರೆ. ಮದುವೆಯ ಆಮಂತ್ರಣ ಪತ್ರಿಕೆಯನ್ನು ವೋಟರ್ ಐಡಿ ಮಾದರಿಯಲ್ಲಿ ಮಾಡಿಸಿದ್ದಾರೆ. ಈ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವುದರ ಜೊತೆಗೆ ಹೊಸ ಟ್ರೆಂಡ್ ವೊಂದನ್ನು ಹುಟ್ಟು ಹಾಕಿದ್ದಾರೆ.

 

 

 

About the author

ಕನ್ನಡ ಟುಡೆ

Leave a Comment