ರಾಜ್ಯ ಸುದ್ದಿ

ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಎಸಿಬಿ ದಾಳಿ

ಬೆಳಗಾವಿ: ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಾನಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಗೌಡ ಪಾಟೀಲ್ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಂದ್ರಗೌಡ ಪಾಟೀಲ್ ಅವರ ರಾಮತೀರ್ಥ ನಗರದ ನಿವಾಸ, ಬೈಲಹೊಂಗಲದ ನಿವಾಸ ಹಾಗೂ ಖಾನಾಪುರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಬಾಗಲಕೋಟೆಯ ಗ್ರಾಮೀಣ ನೀರು ಸರಬರಾಜು ಉಪವಿಭಾಗದ ಎಇಇ ಚಿದಾನಂದ ಮಿಂಚಿನಾಳ ಅವರ ನಿವಾಸದ ಮೇಲೂ ಎಸಿಬಿ ದಾಳಿ ನಡೆಸಿದೆ. ಅಲ್ಲದೆ, ಮಿಂಚನಾಳಗೆ ಸೇರಿದ ವಿಜಯಪುರ ನಗರದ ಸಾಯಿ ಪಾರ್ಕ್ ನಲ್ಲಿರುವ ಎರಡು ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

About the author

ಕನ್ನಡ ಟುಡೆ

Leave a Comment