ರಾಷ್ಟ್ರ ಸುದ್ದಿ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅಸ್ತು

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅನುಮತಿ ನೀಡಿದೆ. ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪಂಚ ಸದಸ್ಯರ ಪೀಠವು, ಎಲ್ಲ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಶಬರಿಮಲೆ ದೇವಸ್ಥಾನವು ಪ್ರವೇಶವನ್ನು ನೀಡಬೇಕು ಎಂದು ಮಹತ್ವದ ತೀರ್ಪು ನೀಡಿದೆ. ತೀರ್ಪನ್ನು ಓದಿದ ಸಿಜೆಐ ದೀಪಕ್‌ ಮಿಶ್ರಾ ಅವರು, ಮಹಿಳೆಯರು ಪುರುಷರಿಗಿಂತ ಕೀಳಲ್ಲ. ಒಂದು ಕಡೆ ಮಹಿಳೆಯರನ್ನು ದೇವರಂತೆ ಪೂಜಿಸಲಾಗುತ್ತದೆ. ಆದರೆ ಮತ್ತೊಂದೆಡೆ ಅದೇ ಮಹಿಳೆಯರನ್ನು ನಿರ್ಬಂಧಿಸಲಾಗುತ್ತದೆ. ದೇವರೊಂದಿಗಿನ ಸಂಬಂಧವನ್ನು ಜೈವಿಕ ಅಥವಾ ದೈಹಿಕ ಅಂಶಗಳಿಂದ ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಳೆಯ ಕುರಿತ ಗ್ರಹಿಕೆ ಬದಲಾಗಬೇಕು. ಸಾಮಾಜಿಕ ಬದಲಾವಣೆ ಅಗತ್ಯವಿದೆ. ಮಹಿಳೆಯರನ್ನು ಸಮಾನವಾಗಿ ಪರಿಗಣಿಸಬೇಕು. ಮಹಿಳೆ ಬಗೆಗಿನ ದೃಷ್ಟಿಕೋನ ಬದಲಾಗಬೇಕು. ಮಹಿಳೆ ಬಗೆಗಿನ ತಾರತಮ್ಯ ನಿವಾರಣೆ ಆಗಬೇಕು. ಮಹಿಳೆಯರು ಅಬಲೆಯರಲ್ಲ. ಮಹಿಳೆಯರ ಬಗೆಗಿನ ಪೂಜ್ಯ ಭಾವನೆಗೆ ಧಕ್ಕೆ ಆಗಬಾರದು. ಧರ್ಮದಲ್ಲೂ ಪುರುಷ ಪ್ರಧಾನವಾಗಬಾರದು ಎಂದು ನ್ಯೂಯಾಧೀಶರಾದ ಮಿಶ್ರಾ, ಖಾನ್ವಿಲ್ಕರ್ ಜಂಟಿ ತೀರ್ಪು ನೀಡಿದ್ದಾರೆ. ಮಹಿಳಾ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರಿಂದ ಮಹಿಳೆಯರ ದೇಗುಲ ಪ್ರವೇಶಕ್ಕೆ ವಿರೋಧ ವ್ಯಕ್ತವಾಗಿದ್ದು, 4:1 ಅಂತರದಲ್ಲಿ ಸುಪ್ರೀಂ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಅಯ್ಯಪ್ಪ ದೇಗುಲ ಮಂಡಳಿಯಿಂದ ಮೇಲ್ಮನವಿಗೆ ನಿರ್ಧಾರ: ಎಲ್ಲ ವಯೋಮಾನದ ಮಹಿಳೆಯರಿಗೂ ಕೇರಳ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಸುಪ್ರೀಂ ಅನುಮತಿ ನೀಡಿರುವ ಬೆನ್ನಲ್ಲೆ ಅಸಮಾಧಾನ ವ್ಯಕ್ತಪಡಿಸಿರುವ ಟ್ರಾವಂಕೂರು ದೇವಾಲಯ ಮಂಡಳಿಯು ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಮಂಡಳಿ ಸದಸ್ಯ ರಾಹುಲ್ ಈಶ್ವರ್ ಅವರು ಸುಪ್ರೀಂನ ಶಬರಿಮಲೆಯ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನಿರ್ಧಿಸಿದ್ದಾರೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ನಿತ್ಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.

About the author

ಕನ್ನಡ ಟುಡೆ

Leave a Comment