ರಾಜ್ಯ ಸುದ್ದಿ

ಶಾಸಕರಿಗೆ ಕೋಟ್ಯಂತರ ರೂಪಾಯಿ ಆಫರ್​ ನೀಡುತ್ತಿದೆ ಬಿಜೆಪಿ: ಸಿದ್ದರಾಮಯ್ಯ ಆರೋಪ

ಚಿಕ್ಕಮಗಳೂರು: ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅವರಿಗೆ ಸರ್ಕಾರ ರಚನೆಗೆ ಜನಾದೇಶವಿಲ್ಲದಿದ್ದರೂ ಆರು ತಿಂಗಳಿಂದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೀರೂರಿನಲ್ಲಿ ಮಾತನಾಡಿ, ಬಿಜೆಪಿಯವರು ಲಜ್ಜೆಗೆಟ್ಟವರು. ಯಡಿಯೂರಪ್ಪನವರಿಗೆ 77ವರ್ಷಗಳಾದರೂ ಬುದ್ಧಿ ಬಂದಿಲ್ಲ. ಮುಖ್ಯಮಂತ್ರಿಯಾಗುವ ಆಸೆ ಇನ್ನೂ ಹೋಗಿಲ್ಲ. ಬಿಜೆಪಿಯವರು ಮಾಧ್ಯಮದವರಿಗೆ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯವರು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದು ಜನರೇ ಆದೇಶ ನೀಡಿದ್ದಾರೆ. ಆದರೆ ಬಿಜೆಪಿಯವರು ಶಾಸಕರಿಗೆ ಕೋಟ್ಯಂತರ ರೂಪಾಯಿ ಆಫರ್​ ಕೊಡುತ್ತಿದ್ದಾರೆ. ಹರಿಯಾಣದಲ್ಲಿ ಎಲ್ಲರನ್ನೂ ಕೂಡಿಟ್ಟುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

About the author

ಕನ್ನಡ ಟುಡೆ

Leave a Comment