ರಾಜ್ಯ ಸುದ್ದಿ

ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಿದ್ರೆ ಆ ಪ್ರಶಸ್ತಿಗೆ ಗೌರವ ಹೆಚ್ಚುತ್ತದೆ: ರಾಮ್‌ದೇವ್

ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಬೆನ್ನಲ್ಲೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬ ಕೂಗು ಜೋರಾಗುತ್ತಿದ್ದು ಈ ಮಧ್ಯೆ ಯೋಗ ಗುರು ಬಾಬಾ ರಾಮ್‌ದೇವ್ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರತ್ನ ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ ಪಡೆಯುವ ಸಲುವಾಗಿ ಬೆಂಗಳೂರಿಗೆ ಆಗಮಿಸಿದ ಬಾಬಾ ರಾಮ್‌ದೇವ್ ಅವರು, ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿದರೆ ಈ ಪ್ರಶಸ್ತಿಯ ಗೌರವ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಭಾರತ ರತ್ನ ಪ್ರಶಸ್ತಿಯನ್ನು ಕ್ರೀಡೆ, ಸಂಗೀತ, ರಾಜಕೀಯ ವ್ಯಕ್ತಿಗಳಿಗೆ ನೀಡಬಹುದಾದರೆ ತ್ರಿವಿಧ ದಾಸೋಹಿಗೆ ಯಾಕೆ ನೀಡಿ ಗೌರವಿಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
111 ವರ್ಷಗಳ ಕಾಲ ಸುದೀರ್ಘ ಬಾಳಿದ್ದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಬೆಳ್ಳಗೆ 11.44ರ ಸುಮಾರಿಗೆ ಲಿಂಗೈಕ್ಯರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಅಂತಿಮ ದರ್ಶನಕ್ಕೆ ಹಣಿ ಮಾಡಲಾಗಿದ್ದು ಲಕ್ಷಾಂತರ ಮಂದಿ ಭಕ್ತರು ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.

About the author

ಕನ್ನಡ ಟುಡೆ

Leave a Comment