ರಾಷ್ಟ್ರ ಸುದ್ದಿ

ಶೋಪಿಯಾನ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಮೂವರು ಉಗ್ರರ ಹತ್ಯೆ

ಶೋಪಿಯಾನ್: ಇಲ್ಲಿನ ಕೆಲ್ಲರ್ ಪ್ರದೇಶದಲ್ಲಿ ಗುರುವಾರ ನಸುಕಿನ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂದು ಇನ್ನೂ ಪತ್ತೆಯಾಗಿಲ್ಲ. ಕಳೆದ ರಾತ್ರಿಯಿಂದ ಕೇಂದ್ರ ಮೀಸಲು ಪೊಲೀಸ್ ಪಡೆ, ಸೇನೆ ಮತ್ತು ರಾಜ್ಯ ಪೊಲೀಸರ ತಂಡ ಜಂಟಿಯಾಗಿ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿತ್ತು. ಇದೀಗ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

About the author

ಕನ್ನಡ ಟುಡೆ

Leave a Comment