ರಾಷ್ಟ್ರ ಸುದ್ದಿ

ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ

ವಾರಣಾಸಿ: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು  ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಾರಾಣಸಿಯಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ದಗಂಗಾ ಶ್ರೀಗಳನ್ನು ನೆನಪಿಸಿಕೊಂಡರು.
ಪ್ರತಿ ಬಾರಿ ತುಮಕೂರು ಸಮೀಪದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಹಲವರು ಬಾರಿ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅವರು ಸಮಾಜಕ್ಕೆ, ಮಾನವ ಕಲ್ಯಾಣಕ್ಕೆ ನೀಡಿರುವ ಕೊಡುಗೆ ಅನನ್ಯ. ಮಹಾನ್‌ ಸಂತ, ಮಹಾನ್ ಋಷಿ ಅಗಲಿಕೆ ನಮಗೆ ತುಂಬಲಾರದ ನಷ್ಟವಾಗಿದೆ ಎಂದು ಮೋದಿ ಹೇಳಿದರು.
ಈ ನಡುವೆ ಮಠಕ್ಕೆ ಜನಸಾಗರವೇ ಹರಿದುಬರುತ್ತಿದೆ. ಮಠಕ್ಕೆ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗಿದೆ.

About the author

ಕನ್ನಡ ಟುಡೆ

Leave a Comment