ರಾಷ್ಟ್ರ ಸುದ್ದಿ

ಶ್ರೀನಗರ: ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಗುರುವಾರ ತಿಳಿದುಬಂದಿದೆ.
ಬಾರಾಮುಲ್ಲಾದ ಸೊಪೋರ್’ ನ ಬರತ್ಕಲನ್-ಗುಂಡ್ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಬದಲಾಯಿಸಿದ ಯೋಧರು, ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment