ರಾಷ್ಟ್ರ ಸುದ್ದಿ

ಶ್ರೀಶಾಂತ್ ಗೆ ಕೇರಳ ಹೈಕೋಟ್೯ನಿಂದ ಬಿಗ್ ರಿಲೀಫ್ !

ಕೊಚ್ಚಿ: ಟೀಮ್ ಇಂಡಿಯಾದ ವೇಗಿ ಶ್ರೀಶಾಂತ್‌ಗೆ ಬಿಸಿಸಿಐ ವಿಧಿಸಿರುವ ಜೀವಾವಧಿ ನಿಷೇಧವನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಇಂದು ಸೂಚನೆ ನೀಡಿದೆ.

2013ರಲ್ಲಿ ನಡೆದ ಇಂಡಿಯನ್‌ ಪ್ರಿಮೀಯರ್‌ ಲೀಗ್‌‌‌ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಮೇಲೆ ಅಜೀವ ನಿಷೇಧ ಹೇರಿತ್ತು. ಶ್ರೀಶಾಂತ್ ಇದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು.

ಟೀಂ ಇಂಡಿಯಾದ ವೇಗಿ ಶ್ರೀಶಾಂತ್ ಮೇಲೆ ವಿಧಿಸಿದ್ದ ಜೀವಾವಧಿ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಏಪ್ರಿಲ್‌ನಲ್ಲಿ ಕೇರಳ ಹೈಕೋರ್ಟ್‌ಗೆ ಸ್ಪಷ್ಟಪಡಿಸಿತ್ತು. ದೆಹಲಿ ನ್ಯಾಯಾಲಯ ಅವರನ್ನು ದೋಷಮುಕ್ತಗೊಳಿಸಿದ್ದರೂ ಕೂಡಾ ಕ್ರಿಕೆಟ್ ಮಂಡಳಿಯ ಆಂತರಿಕ ಸಮಿತಿ ಅದಕ್ಕೆ ಒಪ್ಪುವುದಿಲ್ಲ. ಮಂಡಳಿಯ ನಿಯಮಗಳನ್ನು ಉಲ್ಲಂಘಿಸುವವರನ್ನು ಸಹಿಸಿಕೊಳ್ಳಲಾಗದು ಎಂದು ತಿಳಿಸಿತ್ತು.

ಇದನ್ನು ಪ್ರಶ್ನಿಸಿ ಶ್ರೀಶಾಂತ್‌ ಮತ್ತೊಮ್ಮೆ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸದ್ಯ ಅವರ ಮೇಲೆ ಹೇರಿರುವ ಜೀವಾವಧಿ ನಿಷೇಧ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ ನೀಡಿದೆ.

About the author

ಕನ್ನಡ ಟುಡೆ

Leave a Comment