ರಾಜ್ಯ ಸುದ್ದಿ

ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ: ವಾರದಲ್ಲಿ ಡಿಸ್ಚಾರ್ಜ್ ಸಾಧ್ಯತೆ

ತುಮಕೂರು: ಯಕೃತ್ತು ಮತ್ತು ಪಿತ್ತನಾಳದ ಸಮಸ್ಯೆಯಿಂದಾಗಿ ಚೆನ್ನೈನ ರೆಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು, ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಐಸಿಯುವಿನಿಂದ ವಾರ್ಡ್’ಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
ಬೈಪಾಸ್ ಮಾದರಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶ್ರೀಗಳಿಗೆ ಈವರೆಗೆ ಗ್ಲೂಕೋಸ್ ನೀಡಲಾಗಿತ್ತು. ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಅವರಿಗೆ ದ್ರವರೂಪದ ಆಹಾರ ನೀಡಲಾಗುತ್ತಿದೆ. ಇಷ್ಟಲಿಂಗ ಪೂಜೆ ಮಾಡಬೇಕೆಂದು ಶ್ರೀಗಳು ಹೇಳುತ್ತಿರುವುದರಿಂದ ವಾರ್ಡ್’ಗೆ ಶಿಫ್ಟ್ ಆದ ಮೇಲೆ ಅವಕಾಶ ಕಲ್ಪಿಸಲು ವೈದ್ಯರು ಸಮ್ಮತಿಸಿದ್ದಾರೆ. ಶ್ರೀಗಳ ಆರೋಗ್ಯವನ್ನು ಮತ್ತೊಮ್ಮೆ ತಪಾಸಣೆ ಮಾಡಿ ಮುಂದಿನ ವಾರದೊಳಗೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕರೆದುಕೊಂಡು ಬರಲಾಗುತ್ತದೆ ಎಂದು ಮಠದ ಕಿರಿಯ ಸ್ವಾಮೀಜಿಗಳು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment