ರಾಜಕೀಯ

ಸಚಿವ ಡಿ.ಕೆ ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು:  ಐಟಿ ಇಲಾಖೆ ದಾಳಿಯ ವೇಳೆ ಕೆಲವು ದಾಖಲೆಗಳನ್ನು ನಾಶ ಮಾಡಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ಇಂದು ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಐಟಿಯ ಇಲಾಖೆಯು ಈ ಪ್ರಕಾರ ಪ್ರಕರಣವನ್ನು  ದಾಖಲಿಸಿಕೊಂಡಿದ್ದು “ಆರ್ಥಿಕ ಅಪರಾಧ ಪ್ರಕರಣ ನ್ಯಾಯಾಲಯದ” ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಇದರ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಡಿಕೆಶಿ ಹಾಜರು.

ಸಚಿವ ಡಿ.ಕೆ ಶಿವಕುಮಾರ್  ವಿರುದ್ಧ ಆದಾಯ ತೆರಿಗೆ ವಂಚನೆ ರೆಸಾರ್ಟ್‌ ಮೇಲೆ ದಾಳಿ ನಡೆಸಿದ ವೇಳೆ ಕೆಲವು ಮಹತ್ವದ ಮಾಹಿತಿಯನ್ನು ಹರಿದು ಹಾಕಿದ್ದಾರೆ ಎಂದು ಅಕ್ರಮವಾಗಿ ಸಾಲ ನೀಡಿ ತೆರಿಗೆ ವಂಚನೆ ಮಾಡಿರುವ ಆರೋಪಗಳಿದ್ದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಒಟ್ಟು ಮೂರು ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿವೆ.

 

 

About the author

ಕನ್ನಡ ಟುಡೆ

Leave a Comment