ರಾಜ್ಯ ಸುದ್ದಿ

ಸತ್ತ ಕುದುರೆಗಳೆಲ್ಲ ಮಾತನಾಡುವಂತಾಗಿದೆ: ಚಲುವರಾಯಸ್ವಾಮಿ ವಿರುದ್ಧ ಸಚಿವ ಪುಟ್ಟರಾಜು ವಾಗ್ದಾಳಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಯಾರ ಬಳಿಯೂ ನಮಗೆ ಅಂಗಲಾಚಬೇಕಾದ ಸ್ಥಿತಿ ಇಲ್ಲ. ಮೈತ್ರಿಗಾಗಿ ಯಾರೂ ಗೋಗೆರೆಯುತ್ತಿಲ್ಲ ಎಂದು ಸಚಿವ ಸಿ.ಎಸ್‌.ಪುಟ್ಟರಾಜು ಕಾಂಗ್ರೆಸ್‌ ನಾಯಕ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಮಂಡ್ಯದ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡೆಡ್ ಹಾರ್ಸ್ ಗಳೆಲ್ಲಾ ಮಾತನಾಡುವ ಹಾಗಾಗಿದೆ ಎಂದು ಚೆಲುವರಾಯಸ್ವಾಮಿ ಅವರನ್ನು ಸತ್ತ ಕುದುರೆಗೆ ಹೋಲಿಸಿದ್ದಾರೆ. ಇತಿಹಾಸದಲ್ಲಿ 52 ಸಾವಿರ ಲೀಡ್ ನಲ್ಲಿ ನಾಗಮಂಗಲದಲ್ಲಿ ಗೆದ್ದಿದ್ದು ನೋಡಿದ್ದೀರಾ. ಚೆಲುವರಾಯಸ್ವಾಮಿ ಅವರನ್ನು ಜನರು ಸ್ವಲ್ಪ ಬಾಯಿಮುಚ್ಚಿಕೊಂಡು ಇರಲಿ ಎಂದು ಜನ ಸೋಲಿಸಿ ಕಳುಹಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ನಮ್ಮ ಪಕ್ಷದಲ್ಲಿ ಸಮರ್ಥರಿದ್ದಾರೆ. ಸ್ಪರ್ಧೆಯೂ ಇದೆ. ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಸಿಎಂ ಕುಮಾರ ಸ್ವಾಮಿ ತೀರ್ಮಾನ ಮಾಡುತ್ತಾರೆ. ಹೀಗೆ ತೀರ್ಮಾನ ಮಾಡಿದ ಅಭ್ಯರ್ಥಿಯನ್ನು ಅತ್ಯಂತ ಅಂತರದಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ಗೆಲ್ಲಿಸಿಕೊಡುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

About the author

ಕನ್ನಡ ಟುಡೆ

Leave a Comment