ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಪೋಷಕರ-ಶಿಕ್ಷಕರ ಸಭೆ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯದ “ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ”ಯು ಮುಂದಿನ ಶೈಕ್ಷಣಿಕ ವರ್ಷದಿಂದ ಪೋಷಕರ ಮತ್ತು ಶಿಕ್ಷಕರ ಸಭೆಗಳನ್ನು ಪರಿಚಯಿಸಲು ನಿರ್ಧರಿಸಿದೆ. ಖಾಸಗಿ ಶಾಲೆಗಳನ್ನು ಮಾದರಿಯಾಗಿರಿಸಿಕೊಂಡು ಈ ರೀತಿಯ ಪೋಷಕರ ಮತ್ತು ಶಿಕ್ಷಕರ ಸಭೆಗಳನ್ನು ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಗೊಳಿಸಲು ಇಲಾಖೆ ತೀರ್ಮಾನಿಸಿದೆ.

ಶಾಲಾ ‘ಮುಖ್ಯೋಪಾದ್ಯಾಯರು/ನಿಯರು’ ತಮ್ಮ ಶಾಲೆಯಲ್ಲಿ ಮೂರು ತಿಂಗಳಿಗೊಮ್ಮೆ ಇಂತಹಾ ಸಭೆ ನಡೆಸಬೇಕು ಎಂದು ಇಲಾಖೆ ತಿಳಿಸಿದೆ. ಈ”ಸಭೆಗಳಿಂದ ಪೋಷಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಅವಕಾಶವಾಗಲಿದೆ” ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ ಸರ್ಕಾರದ ಈ ಕ್ರಮವನ್ನು ಶಿಕ್ಷಕವರ್ಗ ಸ್ವಾಗತಿಸಿದೆ.

“ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ  “ಪಿಟಿಎಂ”ಗಳನ್ನು ಆಯೋಜಿಸುವುದನ್ನು ಕಡ್ಡಾಯಗೊಳಿಸಬೇಕೆಂದು ನಮ್ಮ ಇಲಾಖೆಯ ಅಧಿಕಾರಿಗಳಿಗೆ ಹೇಳಿದ್ದೇನೆ ಇದರಿಂದ ಪೋಷಕರ ಮತ್ತು ಶಿಕ್ಷಕರ ಮಗುವಿನ ಬೆಳವಣಿಗೆ ಕುರಿತು ತಿಳಿಯುವುದು ಸುಲಭವಾಗಲಿದೆ” ಎಂದು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಟ್ ಹೇಳಿದ್ದಾರೆ.

 

 

 

 

 

About the author

ಕನ್ನಡ ಟುಡೆ

Leave a Comment