ರಾಜ್ಯ ಸುದ್ದಿ

ಸಿಎಂ ಎಲ್ಲ ಬೆಳೆಗಾರರಿಗೂ ನ್ಯಾಯ ಒದಗಿಸುತ್ತಾರೆ: ಅನಿತಾ ಕುಮಾರಸ್ವಾಮಿ

ರಾಮನಗರ: ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ವಿಚಾರ ನನಗೇನು ಗೊತ್ತಿಲ್ಲ. ಅದೆಲ್ಲ ರಾಜ್ಯದ ವಿಷಯ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ರೈತರ ಬಗ್ಗೆ ಮುಖ್ಯಮಂತ್ರಿಯವರಿಗೆ ಕಾಳಜಿ ಇದೆ. ಈ ವಿಚಾರವನ್ನೆಲ್ಲ ಸಿಎಂ ಬಳಿಯೇ ಮಾತನಾಡಿ. ಸಿಎಂ ರೈತರನ್ನು ಕರೆದು ಮಾತನಾಡಿಸುತ್ತಾರೆ. ಕಬ್ಬು ಬೆಳೆಗಾರರು ಮಾತ್ರವಲ್ಲ. ಎಲ್ಲ ಬೆಳೆಗಾರರಿಗೂ ನ್ಯಾಯ ಒದಗಿಸುತ್ತಾರೆ. ಅದರಲ್ಲಿ ರಾಜಕೀಯ ಬೆರೆಸುವುದು ಬೇಡ ಎಂದರು.

ನನ್ನ ಕ್ಷೇತ್ರದ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಎಲ್ಲ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ. ಮೊದಲನೇಯದಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡುವುದೇ ನನ್ನ ಆದ್ಯತೆ ಎಂದು ತಿಳಿಸಿದರು.

About the author

ಕನ್ನಡ ಟುಡೆ

Leave a Comment