ರಾಜ್ಯ ಸುದ್ದಿ

ಸಿಎಂ ಕುಮಾರಸ್ವಾಮಿ ಮಧ್ಯಸ್ಥಿಕೆ: ಬೆಳಗಾವಿ ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್

ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ನೀಡಬೇಕೆಂದು  ಒತ್ತಾಯಿಸಿ ರೈತರು ಮಾಡುತ್ತಿದ್ದ ಅಹೋರಾತ್ರಿ ಪ್ರತಿಭಟನೆ ತಾತ್ಕಾಲಿಕವಾಗಿ ಅಂತ್ಯವಾಗಿದೆ. ಸಿಎಂ ಕುಮಾರ ಸ್ವಾಮಿ ಮಾತನಾಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದೆ.
ಸೋಮವಾರ ಬೆಳಗಾವಿಗೆ ಬಂದು ತಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂಬ ಸಂದೇಶ ನೀಡಿದ ನಂತರ, ರೈತರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರೈತರ ಜೊತೆ ಮಾತುಕತೆ ನಡೆಸುವಂತೆ ಬೆಳಗಾವಿ ಡಿಸಿ ಎಸ್. ಬಿ ಬೊಮ್ಮನಹಳ್ಳಿ ಅವರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಅಡ್ಡಿ ಪಡಿಸುವುದಾಗಿ ರೈತರು ಬೆದರಿಕೆ ಒಡ್ಡಿದ್ದಾರೆ. ಪ್ರತಿಭಟನೆಯನ್ನು ರಾಜಕೀಯಗೊಳಿಸುವುದು ಬೇಡ, ಸರ್ಕಾರ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಿದ್ದವಿದೆ ಎಂದು ಸಿಎಂ ಆಶ್ವಾಸನೆ ನೀಡಿದ್ದಾರೆ. ಪ್ರತಿಭಟನೆ ಅಂಗವಾಗಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಮುಷ್ಕರ ಹೂಡಿದ್ದರು. ಶುಕ್ರವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಸ್ನಾನ ಮಾಡಿ ತಮ್ಮ ಆಕ್ರೋಶ ವ್ಯಕತ ಪಡಿಸಿದರು. ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲ ಹಾಗೂ ಬಾಕಿ ಉಳಿಸಿಕೊಂಡಿರುವ ಹಣವನ್ನು ಪಾವತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

About the author

ಕನ್ನಡ ಟುಡೆ

Leave a Comment