ರಾಜ್ಯ ಸುದ್ದಿ

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಗದ್ದುಗೆ ಮೇಲೆ ತಾವು ಕಣ್ಣಿಟ್ಟಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಶಾಸಕರನ್ನು ನಿಯಂತ್ರಿಸುವ ಹೊಣೆಗಾರಿಕೆ ತಮ್ಮ ಮೇಲಿದ್ದು, ಅದನ್ನು ನಿಭಾಯಿಸುವುದಾಗಿ ತಿಳಿಸಿದರು. ಅದನ್ನು ಜೆಡಿಎಸ್ ನಾಯಕರು ಮಾಡಲಿ ಎಂದು ನಾನು ಹೇಳಲು ಸಾಧ್ಯವೆ?’ ಎಂದು ಮರು ಪ್ರಶ್ನೆ ಹಾಕಿದರು. ‘ಮೈತ್ರಿ ಸರಕಾರದಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಇಲ್ಲದ ಬಿಕ್ಕಟ್ಟನ್ನು ಸೃಷ್ಟಿಸಲು ಮಾಧ್ಯಮಗಳು ಹವಣಿಸುತ್ತಿವೆ’ ಎಂದು ಸಿದ್ದರಾಮಯ್ಯ ದೂಷಿಸಿದರು. ಪದತ್ಯಾಗಕ್ಕೆ ಸಿದ್ಧ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದ ಅವರು, ಹಾಗಿದ್ದರೂ ಅವರ ಜತೆ ಮಾತುಕತೆ ನಡೆಸುವುದಾಗಿ ಹೇಳಿದರು.

About the author

ಕನ್ನಡ ಟುಡೆ

Leave a Comment