ರಾಜಕೀಯ ಸುದ್ದಿ

ಸಿಎಂ ಭೇಟಿ ಮಾಡಿದ ಸುದೀಪ್‌

ಬೆಂಗಳೂರು: ಇತ್ತೀಚೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದ ಚಿತ್ರನಟ ಸುದೀಪ್‌, ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ಏಪ್ರಿಲ್‌ 7 ರಂದು ನಡೆಯುವ ಸಿಸಿಎಲ್‌ ಕ್ರಿಕೆಟ್‌ ಉದ್ಘಾಟನೆ ಮಾಡಲು ಮುಖ್ಯಮಂತ್ರಿಗೆ ಆಹ್ವಾನ ನೀಡಲು ಆಗಮಿಸಿದ್ದರು ಎನ್ನಲಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಜಕೀಯ ಚರ್ಚೆಯೂ ನಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಡಾ.ಯತೀಂದ್ರ ಸ್ಪರ್ಧಿಸುವ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರಗಳಲ್ಲಿ ನಾಯಕ ಸಮುದಾಯ ಹೆಚ್ಚಾಗಿರುವುದರಿಂದ ಸುದೀಪ್‌ ಅಲ್ಲಿ ಜೆಡಿಎಸ್‌ ಪರ ಪ್ರಚಾರ ಮಾಡಿದರೆ ಕಾಂಗ್ರೆಸ್‌ಗೆ ಕಷ್ಟವಾಗಬಹುದು ಎಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕೆಲವು ಮುಖಂಡರು ಸುದೀಪ್‌ ಅವರನ್ನು ಸಿದ್ದರಾಮಯ್ಯ ಅವರ ಭೇಟಿ ಮಾಡಿಸಿದ್ದರು ಎನ್ನಲಾಗಿದೆ.

ಆದರೆ, ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸೇರ್ಪಡೆ ವಿಚಾರ ಪ್ರಸ್ತಾಪವಾಗಲಿಲ್ಲ. ಚುನಾವಣೆಯಲ್ಲಿ  ಬೇರೆ ಕ್ಷೇತ್ರಗಳಲ್ಲಿ ಆತ್ಮೀಯರಾಗಿರುವ ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳ ಪರವಾಗಿಯೂ ಸುದೀಪ್‌ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

 

About the author

ಕನ್ನಡ ಟುಡೆ

Leave a Comment