ಕ್ರೀಡೆ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಸ್ಪಿನ್ನರ್ ಕೃನಾಲ್ ಪಾಂಡ್ಯ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಕೃನಾಲ್ ಪಾಂಡ್ಯ ದಾಖಲೆ ನಿರ್ಮಿಸಿದ್ದು, ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಸ್ಪಿನ್ನರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರತ ತಂಡ ಗೆಲ್ಲುವುದರಲ್ಲಿ ಕೃನಾಲ್ ಪಾಂಡ್ಯ ಕೊಡುಗೆಯೂ ಇದ್ದು, ಭಾರತಕ್ಕೆ ಮಾರಕವಾಗಬಹುದಾಗಿದ್ದ ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳನ್ನು ಪೆವಿಲಿಯನ್ ಗೆ ಕಳಿಸುವುದರಲ್ಲಿ ಕೃನಾಲ್ ಪಾಂಡ್ಯ ಯಶಸ್ವಿಯಾಗಿದ್ದರು.  36 ರನ್ ನೀಡಿ 4 ವಿಕೆಟ್ ಗಳಿಸಿದ ಕೃನಾಲ್ ಪಾಂಡ್ಯ ಆಸ್ಟ್ರೇಲಿಯಾದ ಪಿಚ್ ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಭಾರತದ ಸ್ಪಿನ್ನರ್  ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇದಕ್ಕೂ ಮುನ್ನ ಭಾರತದ ಪರವಾಗಿ ಆಸ್ಟ್ರೇಲಿಯಾದಲ್ಲಿ T20ಯಲ್ಲಿ ಉತ್ತಮ ಬೌಲಿಂಗ್ ಮಾಡಿದ್ದ ಕೀರ್ತಿ ಜಸ್ಪ್ರೀತ್ ಬೂಮ್ರಾ ಅವರು ಹೊಂದಿದ್ದರು.

About the author

ಕನ್ನಡ ಟುಡೆ

Leave a Comment