ಕ್ರೀಡೆ

ಸಿಡ್ನಿ: ಏಕದಿನದಲ್ಲಿ ಧೋನಿ 10 ಸಹಸ್ರ ರನ್‌ಗಳ ದಾಖಲೆ

ಸಿಡ್ನಿ: ಭಾರತ ಕ್ರಿಕೆಟ್ ತಂಡದ ಮಾಜಿ ಯಶಸ್ವಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್‌ಗಳ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಧೋನಿ, 10 ಸಹಸ್ರ ರನ್‌ಗಳ ಮೈಲುಗಲ್ಲನ್ನು ತಲುಪಿದ್ದಾರೆ. ಈ ಪಂದ್ಯಕ್ಕೂ ಮುನ್ನ 10 ಸಾವಿರ ಮೈಲುಗಲ್ಲು ತಲುಪಲು ಧೋನಿಗೆ ಕೇವಲ ಒಂದು ರನ್ನಿನ ಅವಶ್ಯಕತೆಯಿತ್ತು. 2004ನೇ ಇಸವಿಯಲ್ಲಿ ಏಕದಿನಕ್ಕೆ ಕಾಲಿರಿಸಿರುವ ಧೋನಿ ಕಳೆದ 15 ವರ್ಷಗಳಲ್ಲಿ ಅನೇಕ ದಾಖಲೆಗಳನ್ನು ಬರೆದಿದ್ದಾರೆ. 2007ರಲ್ಲಿ ಚೊಚ್ಚಲ ಟ್ವೆಂಟಿ-20 ಹಾಗೂ 2011ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಧೋನಿ ನಿರ್ಣಾಯಕ ಪಾತ್ರ ವಹಿಸಿದ್ದರು.

About the author

ಕನ್ನಡ ಟುಡೆ

Leave a Comment