ರಾಜ್ಯ ಸುದ್ದಿ

ಸಿದ್ದಗಂಗಾ ಮಠ ಶ್ರೀಗಳ ಆರೋಗ್ಯ ಸ್ಥಿರ, ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ರವಾನೆ

ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ರವಾನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಅನಾರೋಗ್ಯಕ್ಕೆ ತುತ್ತಾಗಿರುವ ಶ್ರೀಗಳನ್ನು ನೋಡಲು ಚೆನ್ನೈನಿಂದ ಬಂದಿದ್ದ ನುರಿತ ವೈದ್ಯರು ಶ್ರೀಗಳ ಆರೋಗ್ಯ ತಪಾಸಣೆ ಮಾಡಿ ಮಠದಿಂದ ವಾಪಸ್ ಆಗಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರಿನ ಬಿ.ಜಿ.ಎಸ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಅವರು, ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಶ್ರೀಗಳು ಆರಾಮಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪದೇ-ಪದೇ ಸ್ಟಂಟ್ ನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಅವರನ್ನ ನಾಳೆ (ಡಿಸೆಂಬರ್ 7) ಚೆನ್ನೈಗೆ ಕರೆದೊಯ್ಯಲು ನಿರ್ಧರಿಸಲಾಗಿದೆ.  ಆರೋಗ್ಯ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಬೆಂಗಳೂರಿನಿಂದ  ವಿಮಾನದ ಮೂಲಕ ಚೆನ್ನೈ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ರವೀಂದ್ರ ತಿಳಿಸಿದರು.
ಕಳೆದ ಎರಡು ದಿನಗಳಿಂದ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಹೀಗಾಗಿ ಶ್ರೀಗಳನ್ನು ಬಿ.ಜಿ. ಎಸ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

About the author

ಕನ್ನಡ ಟುಡೆ

Leave a Comment