ರಾಜ್ಯ ಸುದ್ದಿ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು. ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. ಮಾಧ್ಯಮವೊಂದ ವರದಿ ಮಾಡಿರುವಂತೆ ಶ್ರೀಗಳಿಗೆ ಕಫ ಹೆಚ್ಚಾಗಿ ಉಸಿರಾಟದಲ್ಲಿ ಸ್ವಲ್ಪ ಏರುಪೇರಾಗಿದೆ. ಶ್ರೀಗಳು ಈಗ ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ. ವೈದ್ಯರು ಶ್ರೀಗಳಿಗೆ ಮೂಗಿನ‌ ಮೂಲಕ ಗ್ಲೂಕೋಸ್ ನೀಡುತ್ತಿದ್ದು, ಸ್ವಾಮೀಜಿಗಳಿಗೆ ಹೈಯರ್‌‌ ಆಂಟಿಬಯೋಟಿಕ್ ಹಾಗೂ ಫಿಸಿಯೋ ತೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಗಂಗಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರೀಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಮಠಕ್ಕೆ ಭೇಟಿ ನೀಡಿದ ಡಾ. ನಿರ್ಮಲಾನಂದನಾಥ ಶ್ರೀ: ಇನ್ನು ಇದ್ಕಕೂ ಮೊದಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ಶ್ರೀಗಳು ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿಗಳವರ ಆರೋಗ್ಯ ವಿಚಾರಿಸಿದರು.

About the author

ಕನ್ನಡ ಟುಡೆ

Leave a Comment