ರಾಜ್ಯ ಸುದ್ದಿ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ: ವೈದ್ಯ ಪರಮೇಶ್

ತುಮಕೂರು: ಅನಾರೋಗ್ಯಕ್ಕೀಡಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ ಹೇಳಿದ್ದಾರೆ. ಶಿವಕುಮಾರ ಸ್ವಾಮಿಗಳ ಅನಾರೋಗ್ಯದ ಕುರಿತು ಭಕ್ತರಲ್ಲಿ ಆತಂಕ ಮನೆ ಮಾಡಿದ್ದು, ತುಮಕೂರಿನ ಮಠದತ್ತ ಭಕ್ತಸಾಗರ ಧಾವಿಸುತ್ತಿರುವಂತೆಯೇ ಇತ್ತ ಮಠದ ಅವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳ ಆಪ್ತ ವೈದ್ಯ ಪರಮೇಶ್ ಅವರು, ಅನಾರೋಗ್ಯಕ್ಕೀಡಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು  ಹೇಳಿದರು.
‘ಸಿದ್ದಗಂಗಾ ಶ್ರೀಗಳು ಮಠಕ್ಕೆ ಹೋಗಲೇ ಬೇಕು ಎಂದು ಪಟ್ಟು ಹಿಡಿದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಕರೆತರಲಾಗಿದೆ. ಶ್ರೀಗಳಿಗೆ ಸೋಂಕು ಕಡಿಮೆಯಾಗಿದ್ದು, ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಾಣುತ್ತಿದೆ. ಸೂಕ್ತ ಚಿಕಿತ್ಸೆ ನೀಡಲಾಗುವುದು. ಕಳೆದ ಒಂದು ತಿಂಗಳಿನಿಂದ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿರಲಿಲ್ಲ. ಆದರೆ ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಕೆಲ ದಿನಗಳ ಬಳಿಕ ಚೇತರಿಕೆ ಕಾಣುವ ವಿಶ್ವಾಸವಿದೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ’ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್​ ಅವರು ಸ್ಪಷ್ಟಪಡಿಸಿದ್ದಾರೆ.
ಕಿರಿಯ ಶ್ರೀಗಳೊಂದಿಗೆ ಸಿಎಂ ಎಚ್ ಡಿಕೆ ನಿರಂತರ ಸಂಪರ್ಕ: ಶ್ರೀಗಳ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದ್ದು, ಇಂದು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ‘ಶ್ರೀಗಳು ಎಲ್ಲವನ್ನೂ ಜಯಿಸಿಕೊಂಡು ಬಂದಿದ್ದಾರೆ. ಆರೋಗ್ಯ ಸಮಯವಾದ್ರೂ ಅವರು ಗೆಲ್ಲುತ್ತ ಬಂದಿದ್ದಾರೆ. ಉತ್ತರಾಯಣ ಪುಣ್ಯ ಕಾಲ ಆರಂಭವಾಗಿದೆ. ಪುಣ್ಯಕಾಲದಲ್ಲಿ ಭಗವಂತ ಕರೆದಾಗ ತೆರಳುತ್ತಾರೆ ಎಂದು ಹೇಳಿದರು.

About the author

ಕನ್ನಡ ಟುಡೆ

Leave a Comment