ರಾಜಕೀಯ

ಸಿದ್ದರಾಮಯ್ಯ ಕೊಪ್ಪಳ ಭೇಟಿ ಬಿಜೆಪಿ ಸದಸ್ಯರ ಬಂಧನ

ಕೊಪ್ಪಳ:  ಸಿಎಂ ಸಿದ್ದರಾಮಯ್ಯ ಕೊಪ್ಪಳಕ್ಕೆ  ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಮಾಜಿ ಪರಣ್ಣ ಮುನವಳ್ಳಿ ಅವರನ್ನು  ಬಂಧಿಸಲಾಗಿದೆ.

ಸಿಎಂ ಅವರು ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಸಂಜೆ ಆಗಮಿಸಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ಎಡದಂಡೆ ಕಾಲುವೆಗೆ ನೀರು ಬಿಡುವಂತೆ ಆಗ್ರಹಿಸಿ ಸಿಎಂ ಮುಂದೆ ಬಿಜೆಪಿ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಿದ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಡದಂಡೆ ಕಾಲುವೆಗೆ ನೀರು ಬಿಡುವುದಾಗಿ ಭರವಸೆ ನೀಡಿದ್ದರು. ರೈತರು ಸಿಎಂ ಭರವಸೆ ನಂಬಿ ಭತ್ತ ನಾಟಿ ಮಾಡಿದ್ದಾರೆ.

ಎಡದಂಡೆ ಕಾಲುವೆಗೆ ನೀರು ನಿಲ್ಲಿಸಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ಮುಂಕಡರು ಪ್ರತಿಭಟನೆ ಮಾಡಲು ಸಿದ್ಧರಾಗಿದ್ದಾಗ ಈ ಪ್ರತಿಭಟನೆಯನ್ನು ತಡೆಯುವ ಹಿನ್ನೆಲೆಯಲ್ಲಿ ಪೊಲೀಸ್ ರು    ಅವರನ್ನು ಬಂಧಿಸಲಾಗಿದೆ.

About the author

ಕನ್ನಡ ಟುಡೆ

Leave a Comment