ರಾಷ್ಟ್ರ ಸುದ್ದಿ

ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುವುದಕ್ಕೆ 2 ದಿನಗಳು ಬಾಕಿ ಇದ್ದು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದಾರೆ. ತುಮಕೂರಿನಲ್ಲಿ ಬೃಹತ್ ರ್ಯಾಲಿ ನಡೆಸಿದ ಅಮಿತ್ ಶಾ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಜೆಡಿಎಸ್ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದರೂ ಭ್ರಷ್ಟ ಮಾರ್ಗದಿಂದ ಸರ್ಕಾರ ರಚಿಸಲು ಕಾಂಗ್ರೆಸ್ ಸಹಕಾರ ನೀಡಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

About the author

ಕನ್ನಡ ಟುಡೆ

Leave a Comment