ರಾಜ್ಯ ಸುದ್ದಿ

ಸಿದ್ಧಗಂಗಾ ಶ್ರೀ ಆರೋಗ್ಯವಾಗಿದ್ದಾರೆ, ಭಯಬೇಡ

ತುಮಕೂರು: ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡಬೇಕಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸೋಮವಾರ ಮಧ್ಯಾಹ್ನ ಶ್ರೀಮಠಕ್ಕೆ ಆಗಮಿಸಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಿಎಸ್​ವೈ, ಮುಟ್ಟಿ ನಮಸ್ಕಾರ ಮಾಡಿದಾಗ ಅವರು ಕಣ್ಣು ಬಿಟ್ಟು ನಮ್ಮನ್ನು ಗುರುತಿಸಿದರು. ಪ್ರಸಾದ ಸೇವಿಸುವಂತೆ ಸಂಜ್ಞೆ ಮಾಡಿದರು. ಭಕ್ತರು ಆತಂಕ ಪಡಬೇಕಿಲ್ಲ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಶಸ್ತ್ರಚಿಕಿತ್ಸೆಯಲ್ಲಿ ಆಗಿದ್ದ ಗಾಯ ವಾಸಿಯಾಗಿದೆ. ವಾರದ ನಂತರ ಭಕ್ತರಿಗೆ ದರ್ಶನ ನೀಡಲಿದ್ದಾರೆ ಎಂದರು.

 

About the author

ಕನ್ನಡ ಟುಡೆ

Leave a Comment