ರಾಜ್ಯ ಸುದ್ದಿ

ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನ ಪಡೆದ ನಿರ್ಮಲಾ ಸೀತಾರಾಮನ್, ಬಾಬಾ ರಾಮ್ ದೇವ್

ತುಮಕೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಅವರು ಸೋಮವಾರ ಲಿಂಗೈಕ್ಯರಾದ ತ್ರಿವಿಧ ದಾಸೋಹಿ, ಕಾಯಕಯೋಗಿ ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ನಿರ್ಮಲಾ ಸೀತಾರಾಮನ್ ಅವರು ಇಂದು ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮಿಸಿದ್ದು, ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ ಅವರೇ ಶ್ರೀಗಳ ಅಂತಿಮ ದರ್ಶನ ಪಡೆಯಬೇಕಿತ್ತು. ಆದರೆ ಎಸ್​ಪಿಜಿಯಿಂದ ಕ್ಲಿಯರೆನ್ಸ್ ಸಿಗದ ಕಾರಣ  ಹಾಗೂ ಭದ್ರತೆ,  ಜನರ ಅನುಕೂಲದ ದೃಷ್ಟಿಯಿಂದ ಅವರು ತುಮಕೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಅವರ ಸರ್ಕಾರದ ಪರವಾಗಿ ರಕ್ಷಣಾ ಸಚಿವರು ಆಗಮಿಸಿದ್ದಾರೆ.

About the author

ಕನ್ನಡ ಟುಡೆ

Leave a Comment