ರಾಜ್ಯ ಸುದ್ದಿ

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’; ಕನ್ನಡಿಗರಿಗೆ ಕನ್ನಡದಲ್ಲೇ ನಟ ಪವನ್ ಕಲ್ಯಾಣ್ ಹೇಳಿದ್ದೇನು

ಬೆಂಗಳೂರು: ಟಾಲಿವುಡ್​ ಪವರ್ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ. 63ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ನಟ ಪವನ್ ಕಲ್ಯಾಣ್ ಕನ್ನಡಿಗರಿಗೆ ಶುಭಾಶಯ ಕೋರಿದ್ದು, ‘ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಕನ್ನಡದಲ್ಲೇ ಟ್ವೀಟ್​ ಮಾಡಿದ್ದಾರೆ. ಅಲ್ಲದೆ ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂಬ ಘೋಷಣೆಯನ್ನೂ ಕೂಗಿ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಪವನ್ ಕಲ್ಯಾಣ್, ‘ನನ್ನ ಪ್ರೀತಿಯ ಹಾಗೂ ಗೌರವಾನ್ವಿತ ಸಹೋದರ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಅಭಿವೃದ್ಧಿಯನ್ನು ಹೊಂದುತ್ತಿದೆ ಎಂಬುದನ್ನು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment