ರಾಜಕೀಯ

ಸಿ.ಎಂ.ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಮಾರ್ಚ 23 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಈ ಕುರಿತು ವರಿಷ್ಟರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಹಾಗೂ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆ ಬೇಡವೇ ಎಂಬುದರ ಕುರಿತು ಸಿದ್ದರಾಮಯ್ಯ ಮಾತುಕತೆ ನೆಡೆಸಲಿದ್ದಾರೆ. ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಪ್ರಸ್ತಾವವನ್ನು ಜೆ.ಡಿ.ಎಸ್.ಮುಂದಿಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ವರಿಷ್ಟರ ಜೊತೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆಯಿದೆ.

About the author

ಕನ್ನಡ ಟುಡೆ

Leave a Comment