ರಾಷ್ಟ್ರ ಸುದ್ದಿ

ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸಂಜಯ್ ಜೈನ್ ನೇಮಕ

ನವದೆಹಲಿ: ಹಿರಿಯ ವಕೀಲ ಸಂಜಯ್ ಜೈನ್ ಅವರನ್ನು ಸುಪ್ರೀಂ ಕೋರ್ಟ್ ನ ನೂತನ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಬುಧವಾರ ನೇಮಕ ಮಾಡಲಾಗಿದೆ.
ಸಂಜಯ್ ಜೈನ್ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಇಂದು ಅಂಕಿತ ಹಾಕಿದ್ದು, 2020ರ ಜೂನ್‌ 30ರವರೆಗೆ ಅಥವಾ ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿರಲಿದ್ದಾರೆ. ಈ ಹಿಂದೆ ದೆಹಲಿ ಹೈಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದ ಸಂಜಯ್ ಜೈನ್ ಅವರು ಇದೀಗ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದಾರೆ.

About the author

ಕನ್ನಡ ಟುಡೆ

Leave a Comment