ರಾಜ್ಯ ಸುದ್ದಿ

ಸುಮಲತಾಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ ಯದುವೀರ್​ ಒಡೆಯರ್

ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದು, ಅಂಬರೀಷ್ ಅವರಿಗೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ ಇತ್ತು ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಅವರು, ನಮ್ಮ ತಂದೆ  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್​, ಅಂಬರೀಷ್​  ಜೊತೆಯಲ್ಲಿ 35 ವರ್ಷಗಳ ಒಡನಾಟ ಹೊಂದಿದ್ದರು. ಅರಮನೆಯ ಕಷ್ಟದ ಸಂದರ್ಭದಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಅವರ ಸಹಾಯವನ್ನು ಮರೆಯುವಂತಿಲ್ಲ. ಅವರಿಗೆ ಮೈಸೂರು ರಾಜ ಮನೆತನ ಎಂದಿಗೂ ಕೃತಜ್ಞವಾಗಿರುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸುಮಲತಾ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್ ಒಡೆಯರ್ ಅವರು, ಅವರ ಹೋರಾಟಕ್ಕೆ ಒಳ್ಳೆಯದಾಗಲಿ. ಬಹಿರಂಗ ಪ್ರಚಾರಕ್ಕೆ ನಾನು ತೆರಳುವುದಿಲ್ಲ. ನಾನು ರಾಜಕೀಯದಿಂದ ದೂರ ಇದ್ದೇನೆ. ಮಂಡ್ಯದ ಜನರಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರೇ ಉತ್ತರ ನೀಡಲಿದ್ದಾರೆ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಷ್ ಗೆ ಬೆಂಬಲ ಸೂಚಿಸಿದರು.

About the author

ಕನ್ನಡ ಟುಡೆ

Leave a Comment