ಸಿನಿ ಸಮಾಚಾರ

ಸುಮಲತಾಗೆ ಬಿಜೆಪಿ ಬಹಿರಂಗ ಬೆಂಬಲ: ನಿಖಿಲ್

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಕಾವು ಇದೀಗ ಜೋರಾಗಿದೆ. ಹೌದು ಪಕ್ಷೇತ್ತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬಹಿರಂಗವಾಗಿ ಬೆಂಬಲ ಸೂಚಿಸಿದ್ದು ಇದು ಜೆಡಿಎಸ್ ಪಕ್ಷದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ದೊಡ್ಡ ಮಟ್ಟದಲ್ಲಿ ನನ್ನನ್ನು ಸೋಲಿಸಲು ಒಂದಷ್ಟು ಶಕ್ತಿಗಳು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನ ನನ್ನ ಪರವಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿಯಿಂದ ಅಧಿಕೃತವಾಗಿ ಬೆಂಬಲ ಘೋಷಣೆ ಆಗಿರುವುದು ನನಗೆ ಮತ್ತಷ್ಟು ಬಲ ಹೆಚ್ಚಿಸಿದೆ. ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. ನನ್ನನ್ನು ಯಾರೂ ನೇರವಾಗಿ ಭೇಟಿ ಮಾಡಿರಲಿಲ್ಲ. ಫೋನ್ ನಲ್ಲೂ ಹೇಳಿರಲಿಲ್ಲ. ಅಂಬರೀಶ್ ಅವರ ಮೇಲಿನ ಗೌರವದಿಂದ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ನನಗೆ ಬೆಂಬಲ ಸೂಚಿಸಿರುವುದು ನಿಜಕ್ಕೂ ತುಂಬಾ ಸಂತೋಷವಾಗಿದೆ. ನನ್ನ ಮನಸಿನಲ್ಲೂ ಬಿಜೆಪಿ ಬೆಂಬಲ ನೀಡಲಿ ಎಂದಿತ್ತು. ಈಗ ನನಗೆ ಮತ್ತಷ್ಟು ಶಕ್ತಿ ಬಂದಂತಾಯಿತು ಎಂದರು.

About the author

ಕನ್ನಡ ಟುಡೆ

Leave a Comment