ರಾಜಕೀಯ

ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ, ಜೆಡಿಎಸ್ ಸೋಲಿಸಲು ಚಕ್ರವ್ಯೂಹ: ಮುಖ್ಯಮಂತ್ರಿ

ಚಿಕ್ಕಮಗಳೂರು: ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ. ಮೇ 23 ರ ನಂತರ ನಾನು ಎಲ್ಲಾ ಪ್ರಶ್ನೆಗಳಿಗೂ ಸೂಕ್ತ ಉತ್ತರ ನೀಡುತ್ತೇನೆ, ಮಂಡ್ಯದಲ್ಲಿ ಯಾರ್ಯಾರು ಏನೇನು ಮಾಡುತ್ತಿದ್ದಾರೆ ಎಂಬ ಬಗ್ಗೆ ನನಗೆ ತಿಳಿದಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment