ಸಿನಿ ಸಮಾಚಾರ

ಸುಮಲತಾ ವಿರುದ್ಧ ನನ್ನ ಗೆಲುವು ನಿಶ್ಚಿತ: ನಿಖಿಲ್ ಕುಮಾರ್

ಬೆಂಗಳೂರು: ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮಾತನಾಡಿದ ನಿಖಿಲ್, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ, ನಾವಿಬ್ಬರೂ ಒಟ್ಟಿಗೆ ಸೇರಿ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದ್ದಾರೆ, ಮಂಡ್ಯ ನಾಯಕರ ಒತ್ತಾಸೆಯಂತೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ, ಜೆಡಿಎಸ್ ಬೆಳೆಸುವುದು ನನ್ನ ಪ್ರಮುಖ ಧ್ಯೇಯ ಎಂದು ನಿಖಿಲ್ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment