ರಾಜಕೀಯ

ಸಿದ್ದರಾಮಯ್ಯನವರು ಈಗ ಸುಲ್ತಾನ್ ಸಿದ್ದರಾಮಯ್ಯ: ಪ್ರತಾಪ್ ಸಿಂಹ

ಮಂಗಳೂರು: ಮಂಗಳೂರು ಚಲೋ ಹಿನ್ನೆಲೆಯಲ್ಲಿ ನಗರದ ಜ್ಯೋತಿ ಸರ್ಕಲ್‌ನಲ್ಲಿ ಹಾಕಿದ್ದ ವೇದಿಕೆಯಲ್ಲಿ ಮಾತಾಡಿದ ಪ್ರತಾಪ್ ಸಿಂಹ ಅವರು, ‘ಸಿದ್ದರಾಮಯ್ಯನವರು ಇಂದು ‘ಸುಲ್ತಾನ್’ ಸಿದ್ದರಾಮಯ್ಯ ಆಗಿದ್ದಾರೆ. ರಮಾನಾಥ ರೈ ರಮಝಾನ್ ರೈ ಆಗಿದ್ದಾರೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ಪಿಎಫ್‌ಐ, ಎಸ್‌ಡಿಪಿಐನಂಥ ಉಗ್ರ ಸಂಘಟನೆಗಳು ಜಿಲ್ಲೆಯಲ್ಲಿ ಬಲವಾಗಿ ಬೇರೂರುತ್ತಿವೆ. ರಾಜ್ಯದೆಲ್ಲೆಡೆ ನಡೆಯುತ್ತಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಲ್ಲಿ ಈ ಸಂಘಟನೆಗಳ ಕಾರ್ಯಕರ್ತರೇ ಸಿಕ್ಕಿಬೀಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರಕಾರ ಈ ಸಂಘಟನೆಗಳ ಕಾರ್ಯಕರ್ತರ ಮೇಲಿದ್ದ ಕೇಸ್‌ಗಳನ್ನು ವಾಪಸ್ ಪಡೆಯುವ ಮೂಲಕ ಬಹುಸಂಖ್ಯಾತ ಹಿಂದೂಗಳನ್ನು ತುಳಿಯುವ ಕೆಲ ಮಾಡುತ್ತಿದೆ ಎಂದು ದೂರಿದರು.

‘ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಅಹಿತಕರ ಘಟನೆಗಳಿಗೆ ಮುಖ್ಯಮಂತ್ರಿಯವರೇ ನೇರ ಕಾರಣ. ಸರಕಾರ ಇಂದು ಮಂಗಳೂರಿನಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಕಾರ್ಯಕರ್ತರ ಬಳಿ ಯಾವುದೇ ಶಸ್ತ್ರಾಸ್ತ್ರವಿರದಿದ್ದರೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿರುವವರನ್ನು ಬಂಧಿಸುವ ಮೂಲಕ ಹೇಡಿತನವನ್ನು ಸರಕಾರ ಪ್ರದರ್ಶಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಕೈಲಾಗದ ಸರಕಾರ ಕೇವಲ ಒಂದು ಬೈಕ್ ರ್‍ಯಾಲಿಗೆ ಹೆದರಿ ಅವಕಾಶ ನಿರಾಕರಿಸಿದೆ.

ಇಂಥ ಪರಿಸ್ಥಿತಿಯಲ್ಲಿ ಬಿಜೆಪಿ, ಸಂಘಟನೆಗಳ ಕಾರ್ಯಕರ್ತರು ಎದೆಗುಂದುವ ಪ್ರಶ್ನೆಯೇ ಇಲ್ಲ. ಸರಕಾರದ ವಿರುದ್ಧ ನಿತಂತರ ಹೋರಾಟ ಮುಂದುವರಿಯಲಿದೆ’ ಎಂದು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲೂ ನಿದ್ದೆಗೆ ಶರಣಾಗಿದ್ದಾರೆ. ಅವರನ್ನು ಎದ್ದೇಳು ನಿದ್ರಾಮಯ್ಯ ಎಂದು ಎಬ್ಬಿಸಲು ಜನರೇ ಮುಂದಾಗಬೇಕಿದೆ. ರಾಜ್ಯಾದ್ಯಂತ ಹಿಂದೂ ಸಂಘಟನೆಗಳ ನಾಯಕರ ಹತ್ಯೆಯಾಗುತ್ತಿದ್ದರೂ ಸರಕಾರ ಕೈಕಟ್ಟಿ ಕೂತಿದೆ. ಬೈಕ್ ರ್‍ಯಾಲಿಗೆ ಅವಕಾಶ ನಿರಾಕರಿಸುವ ಮೂಲಕ ಸರಕಾರ ಬಹುಸಂಖ್ಯಾತ ಹಿಂದೂಗಳನ್ನು ಕೊಲೆಗೈಯಲು ಪಿಎಫ್‌ಐ, ಎಸ್‌ಡಿಪಿಐನಂಥ ಉಗ್ರ ಸಂಘಟನೆಗಳಿಗೆ ಪರೋಕ್ಷ ಅನುಮತಿ ನೀಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಆರೋಪಿಸಿದರು.

ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಈಶ್ವರಪ್ಪ, ಆರ್.ಅಶೋಕ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.

About the author

ಕನ್ನಡ ಟುಡೆ

Leave a Comment