ರಾಜ್ಯ ಸುದ್ದಿ

ಬೆಂಗಳೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ವಿದ್ಯಾರ್ಥಿಗಳ ಸಾವು

ಬೆಂಗಳೂರು: ಸೆಲ್ಫಿ ಕ್ಲಿಕ್ಕಿಸಲು ಹೋಗಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಹಳೆನಿಜಗಲ್ಲು ಕೆರೆಯಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ತಾಲೂಕಿನ ಹಳೆನಿಜಗಲ್ಲು ಕೆರೆಯಲ್ಲಿ ಮುಳುಗಿ ಪೂರ್ಣಚಂದ್ರ, ಮೊಹಮ್ಮದ್, ಶಶಾಂಕ್ ಮೃತಪಟ್ಟಿದ್ದಾರೆ.

ತುಮಕೂರಿನ ಸಿದ್ದಗಂಗಾ ಬಾಯ್ಸ್ ಕಾಲೇಜಿನಿಂದ NSS ಕ್ಯಾಂಪ್​ಗೆ 50 ವಿದ್ಯಾರ್ಥಿಗಳು ಬಂದಿದ್ದರು. ಅವರಲ್ಲಿ ನಾಲ್ವರು ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕ ನೀರಿನಲ್ಲಿ ನಿಂತಿದ್ದ ವೇಳೆ ಓರ್ವ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದ ವೇಳೆ ಸೆಲ್ಫಿ ತೆಗೆಯುತ್ತಿದ್ದ ವಿದ್ಯಾರ್ಥಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಉಳಿದ ನಾಲ್ವರು ವಿದ್ಯಾರ್ಥಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಇವರಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ನೀರಿನಾಳಕ್ಕೆ ಮುಳುಗಿದ್ದಾರೆ.

ನಂತರ ಶಿಕ್ಷಕ ಮತ್ತು ಮತ್ತೊಬ್ಬ ವಿದ್ಯಾರ್ಥಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತದೇಹಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಯುತ್ತಿದೆ. ದಾಬಸ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About the author

ಕನ್ನಡ ಟುಡೆ

Leave a Comment