ರಾಜ್ಯ ಸುದ್ದಿ

ಹಂಪಿ ಸ್ಮಾರಕಗಳಿಗೆ ಹಾನಿ: ಅಪರಾಧಿಗಳ ಶೋಧಕ್ಕಾಗಿ ಬಿಹಾರಕ್ಕೆ ತೆರಳಿದ ಬಳ್ಳಾರಿ ಪೊಲೀಸರು

ಬಳ್ಳಾರಿ: ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಅಪರಾಧಿಗಳನ್ನು ಪತ್ತೆ ಹಚ್ಚಲು ಬಳ್ಳಾರಿ ಪೊಲೀಸರು ಬಿಹಾರಕ್ಕೆ ತೆರಳಿದ್ದಾರೆ, ಹಂಪಿಯಲ್ಲಿ ಸ್ಮಾರಕಗಳನ್ನು ಧ್ವಂಸಗೊಳಿಸಿದ ವಿಡಿಯೋ ಕಳೆದ ವಾರ ವೈರಲ್ ಆಗಿತ್ತು. ಬೆಂಗಳೂರು ಮೂಲದ ರ್ಯಾಪರ್ ಔಶ್ ಶಹಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಟ್ಟಿದ್ದರು. ವಿಡಿಯೋ ನೋಡಿ ಸಾಕಷ್ಟು ಮಂದಿ ಕಿಡಿ ಕಾರಿದ್ದರು. ಈ ಸಂಬಂಧ ಪ್ರಾಚ್ಯ ಸಂಶೋಧನಾ ಇಲಾಖೆ ದೂರು ದಾಖಲಿಸಿತ್ತು. ಬಳ್ಳಾರಿ ಪೊಲೀಸರು ಬಿಹಾರ ತಲುಪಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರ ಬಗ್ಗೆ ಸುಳಿವು ಸಿಕ್ಕಿದ್ದು, ವಿಡಿಯೋ ಜೊತೆ ಪೊಲೀಸರು ಬಿಹಾರ ತಲುಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,ಪ್ರಕರಣ ಸಂಬಂಧ ಕೆಲವು ಸ್ಥಳೀಯರನ್ನು ವಿಚಾರಣೆ ನಡೆಸಲಾಗಿದೆ, ಸದ್ಯ ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment