ರಾಜ್ಯ

ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆ

ಬೆಂಗಳೂರು: ಹಾಸನ ಜಿಲ್ಲಾಧಿಕಾರಿಗಳನ್ನು ಮತ್ತೆ ವರ್ಗಾವಣೆ ಮಾಡಿ ಎಂದು  ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ನೂತನ ಜಿಲ್ಲಾಧಿಕಾರಿಗಳಾಗಿ ಪಿಸಿ ಜಾಫರ್ ನೇಮಕವಾಗಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್‌ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಬದಲಾಯಿಸಿರುವ ರಾಜ್ಯ ಸರ್ಕಾರ ಇದೀಗ ಡಾ.ಪಿ.ಸಿ.ಜಾಫ‌ರ್‌ ಅವರನ್ನು ನೇಮಿಸಿದೆ. ಇದರೊಂದಿಗೆ ಹಾಸನ ಜಿಲ್ಲಾಧಿಕಾರಿ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದ್ದು ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿ ಸಿದಂತೆ ಹೈಕೋರ್ಟ್‌ ನೀಡುವ ಆದೇಶದ ಮೇಲೆ ಮುಂದಿನ ಬೆಳವಣಿಗೆಗಳು ನಡೆಯಲಿವೆ ಎನ್ನಲಾಗಿದೆ.

 

About the author

ಕನ್ನಡ ಟುಡೆ

Leave a Comment