ರಾಜಕೀಯ

ಹಾಸನ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ: ಪ್ರಜ್ವಲ್ ರೇವಣ್ಣ

ಹಾಸನ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದವಿದ್ದು ಅದಕ್ಕಾಗಿ ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದಾರೆ.
ತಮ್ಮ ತಾತ ದೇವೇಗೌಡರ  ನಿರ್ಧಾರದಿಂದ ಪ್ರೇರಿತರಾಗಿರುವ ಪ್ರಜ್ವಲ್ ಚುನಾವಣೆಯಲ್ಲಿ ಸ್ಪರ್ದಿಸಲು ತುದಿಗಾಲಲ್ಲಿ ನಿಂತಿದ್ದಾರೆ, ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ, ಪ್ರಜ್ವಲ್, ಪಕ್ಷದ ಶಾಸಕರು ಹಾಗೂ ಹಿರಿಯ ಮುಖಂಡರೊಡನೆ ಚರ್ಚಿಸಿದ ನಂತರ ಅಭ್ಯರ್ಥಿಯಾಗಿ ಅಧಿಕೃತ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ತಮ್ಮ ತಾತ ಹಾಸನದಿಂದ ಸ್ಪರ್ಧಿಸದಿರುವುದು ನನಗೆ ಬೇಸರ ತಂದಿದೆ ಎಂದು ಹೇಳಿದ ಪ್ರಜ್ವಲ್, ಈಗಾಗಲೇ ಬೇಲೂರು, ಹೊಳೆನರಸೀಪುರ  ಮತ್ತು ಹಾಸನ ವಿಧಾನಸಭೆ ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಆರಂಭಿಸಿದ್ದಾರೆ, ಜೊತೆಗೆ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸಭೆ ನಡೆಸಿದ್ದಾರೆ.
ಹಾಸನ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ, ಇನ್ನೂ ಹಾಸನದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಕಾಂಗ್ರೆಸ್ ನ ಎ. ಮಂಜು  ಬಯಸಿದ್ದಾರೆ, ಈ ಸಂಬಂಧ ದೇವೇಗೌಡರು ರಾಹುಲ್ ಗಾಂಧಿ ಮತ್ತು ಕುಮಾರ ಸ್ವಾಮಿ ಅವರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment